Daily Horoscope
✕

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

Webdunia
ಭಾನುವಾರ, 3 ಮೇ 2026 (12:06 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ವರುಣ ಅಲ್ಲಲ್ಲಿ ಅಬ್ಬರಿಸುತ್ತಿದ್ದಾರೆ. ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಭಾನುವಾರ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಲ್ಲಿ ಹಲವು ದಿನಗಳಿಂದ ಅಲ್ಲಲ್ಲಿ ಮಳೆ ಆಗುತಿದೆ. ಇದರ ಮುಂದುವರೆದ ಭಾಗವಾಗಿ ಇಂದು ಈ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅದರಂತೆ ಮೇ 3-8 ರ ನಡುವೆ ಈ ಭಾಗಗಳಲ್ಲಿ ಗುಡುಗು ಸಿಡಿಲು, ಭಾರಿ ಮಳೆ, ಬಿರುಗಾಳಿ ಮಳೆ ಆಗಲಿದೆ ಎಂದು ಸೂಚನೆ ಹಾಗೂ ಎಚ್ಚರಿಕೆ ನೀಡಲಾಗಿದೆ. 

ಕರಾವಳಿ ಒಣ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆ ಆಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲೇ ಡ್ರಾ ಅಲ್ಲೇ ಬಹುಮಾನ.. ಉತ್ತರ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿಯ ಚುಡಾಯಿಸಿದ ದುರುಳ: ಪೊಲೀಸರು ಏನು ಮಾಡಿದ್ರು ನೋಡಿ Video

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಪಕ್ಷ: ಬಿ.ಶ್ರೀರಾಮುಲು

ರಾಜ್ಯದ ಜನತೆಗೆ ಮತ್ತೊಂದು ಬರೆ: ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ, ಸಂಪೂರ್ಣ ವಿವರ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿ ದರ ಏರಿಕೆ: ಕರ್ನಾಟಕ ಹಾಗೂ ಬೆಂಗಳೂರಿನ ಇಂದಿನ ಮಾರುಕಟ್ಟೆ ವಿವರ

ಸಾಸರ್ ಗಿರ್ ಅಭಯಾರಣ್ಯದಲ್ಲಿ ಊಹಿಸಲಾರದ ಘಟನೆ… ಬೇಟೆಯಾಡಿದ ಜಿಂಕೆಗೆ ಸಿಂಹಿಣಿ ಪ್ರಾಣಭಿಕ್ಷೆ: ಶಾಕಿಂಗ್ Video

ಮುಂದಿನ ಸುದ್ದಿ
Show comments