Publish Date: Thu, 30 Apr 2026 (08:38 IST)
Updated Date: Thu, 30 Apr 2026 (08:40 IST)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಇಂದೂ ಮುಂದುವರಿಯುವ ಸೂಚನೆಯಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ಹವಾಮಾನ ವರದಿ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ನಿನ್ನೆ ಭಾರೀ ಗುಡುಗು ಸಹಿತ ಮಳೆಯಾಗಿತ್ತು. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣ ಮುಂದುವರಿಯಲಿದೆ.
ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಸೂಚನೆಯಿದೆ.
ಬಳ್ಳಾರಿ, ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ವಿಪರೀತ ತಾಪಮಾನ ಕಂಡುಬರಲಿದೆ. ಅದರಲ್ಲೂ ಕಲಬುರಗಿಯಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ತಲಪಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 35 ಡಿಗ್ರಿಯಷ್ಟಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ