ಬೆಂಗಳೂರು: ಕಳೆದ ಕೆಲ ದಿನಗಳಿಂದ ಉರಿಬಿಸಿಲಿನಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಮಂದಿಗೆ ಇಂದು ವರುಣ ತಂಪೆರೆದಿದ್ದಾನೆ.
ಮಧ್ಯಾಹ್ನ ನಂತರ ಮೋಡ ಕವಿದ ವಾತಾವರಣದೊಂದಿಗೆ ಗಾಳಿಯೂ ಜೋರಾಗಿತ್ತು. ಇದೀಗ ಗಾಳಿ ಸಹಿತ ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದೆ. ಆರ್‌ಟಿ ನಗರ, ಎಂಜಿ ರೋಡ್, ಸುಲ್ತಾನ್‌ಪಾಳ್ಯ, ಶಿವಾಜಿನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.
ಇದರಿಂದ ಬಿಸಿಲ ಬೇಗೆಗೆ ಸುಸ್ತಾಗಿದ್ದ ಜನರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. ಹವಾಮಾನ ಇಲಾಖೆ ಇಂದು ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿತ್ತು.
ಬೆಮಗಳೂರಿನಲ್ಲಿ ಸತತ ಮೂರು ನಾಲ್ಕು ದಿನಗಳ ಕಾಲ ಮಳೆಯಾಗುವ ಸೂಚನೆಯನ್ನು ನೀಡಿದೆ.