Publish Date: Sun, 01 Nov 2026 (09:02 IST)
Updated Date: Sat, 31 Oct 2026 (20:54 IST)
ಬೆಂಗಳೂರು: ಕರ್ನಾಟಕದಾದ್ಯಂತ ಹವಾಮಾನದಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಿನ್ನ ವಾತಾವರಣ ನೆಲೆಸಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಕೆಲವು ಭಾಗಗಳಲ್ಲಿ ಒಣ ಹವಾಮಾನ ಹಾಗೂ ತಂಪಾದ ವಾತಾವರಣವಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹವಾಮಾನ
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಬೆಳಗಿನ ಜಾವ ಸಾಧಾರಣ ಚಳಿ ಹಾಗೂ ಮಂಜು ಮುಸುಕಿದ ವಾತಾವರಣ ಕಂಡುಬರಲಿದ್ದು, ಮಧ್ಯಾಹ್ನದ ವೇಳೆ ಸಾಧಾರಣ ಬಿಸಿಲು ಇರಲಿದೆ. ಕೆಲವೆಡೆ ಸ್ಥಳೀಯವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕ ಜಿಲ್ಲೆಗಳ ಮುನ್ಸೂಚನೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದಲ್ಲಿ ತೇವಾಂಶಭರಿತ ವಾತಾವರಣ ಮುಂದುವರಿಯಲಿದೆ. ಕರಾವಳಿಯ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ.
ಉತ್ತರ ಒಳನಾಡು ಜಿಲ್ಲೆಗಳ ವಾತಾವರಣ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ಬಹುತೇಕ ಒಣ ಹವಾಮಾನ ಮತ್ತು ಶುಭ್ರ ಆಕಾಶ ಕಂಡುಬರಲಿದೆ. ದಿನದ ತಾಪಮಾನವು ಸಲ್ಪಮಟ್ಟಿಗೆ ಏರಿಕೆಯಾಗಲಿದ್ದು, ರಾತ್ರಿ ವೇಳೆ ವಾತಾವರಣ ತಂಪಾಗಲಿದೆ.
ಮಲೆನಾಡು ಭಾಗದ ಹವಾಮಾನ ಪರಿಸ್ಥಿತಿಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆಹ್ಲಾದಕರ ಹಾಗೂ ತಂಪಾದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸನ್ನಿವೇಶವಿರಲಿದ್ದು, ಪ್ರಯಾಣಿಕರು ಎಚ್ಚರಿಕೆ ವಹಿಸಬೇಕಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ