Daily Horoscope

Select Your Language

Notifications

webdunia
webdunia
webdunia
webdunia

Karnataka Weather: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ಐಎಂಡಿ ನೀಡಿದ ತಾಜಾ ಅಲರ್ಟ್

Karnataka Rains
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದು ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಮೋಡಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಉತ್ತರ ಒಳನಾಡಿನಲ್ಲಿ ಪ್ರಮುಖವಾಗಿ ಒಣ ಹವಾಮಾನ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಪ್ರಮಾಣದ ಮಳೆ ಅಥವಾ ಗುಡುಗು ಸಹಿತ ಶವರ್ಸ್ ನಿರೀಕ್ಷಿಸಲಾಗಿದೆ. ಸಮುದ್ರ ತೀರದ ಪ್ರದೇಶಗಳಲ್ಲಿ ಗಾಳಿಯ ವೇಗ ಸಾಧಾರಣವಾಗಿದ್ದು, ಮೀನುಗಾರರು ಮತ್ತು ಕರಾವಳಿ ಭಾಗದ ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ. ಮಲೆನಾಡು ಭಾಗದ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ರಾಜ್ಯ ರಾಜಧಾನಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಜುಬಾಜಿನಲ್ಲಿರಲಿದೆ.

ಮತ್ತೊಂದೆಡೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸೂರ್ಯನ ಶಾಖ ಹೆಚ್ಚಿರಲಿದ್ದು, ಶುಷ್ಕ ವಾತಾವರಣ ಕಂಡುಬರಲಿದೆ. ಸಾರ್ವಜನಿಕರು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗೆ ತಕ್ಕಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video