Select Your Language

Notifications

webdunia
webdunia
webdunia
webdunia

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಆಲಿಕಲ್ಲು ಸಹಿತ ಮಳೆ ಸಾಧ್ಯತೆ

Karnataka Weather
ಬೆಂಗಳೂರು: ಸುಡುಬಿಸಿಲಿನ ನಡುವೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. 

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ತುಂತುರು ಮಳೆಯಾಗಲಿದೆ.


ಇನ್ನೂ ಹವಾಮಾನ ಇಲಾಖೆ ಸೂಚನೆಯಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ. 

ಆದ್ದರಿಂದ ಈ ಜಿಲ್ಲೆಗೆ ಆರೆಂಜ್ ಅಲರ್ಟ್‌ ನೀಡಿದೆ.  ಜೊತೆಗೆ 30-40 ಕಿ. ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ