ಬೆಂಗಳೂರು: ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಹಲವೆಡೆ ತುಂತುರು ಮಳೆಯಾಗಿದ್ದು ಭಾರೀ ಅಚ್ಚರಿ ಮೂಡಿಸಿದೆ. ಮಳೆಯ ವಾತಾವರಣದಿಂದ ಮತ್ತಷ್ಟು ಚಳಿ ಹೆಚ್ಚಾಗಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ರಾಜ್ಯದ ದಕ್ಷಿಣ ಒಳಭಾಗ, ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರದ ಜಿಲ್ಲೆಗಳ ಶುಷ್ಕ ಗಾಳಿ ಇರಲಿದೆ. ರಾಜ್ಯದಾದ್ಯಂತ ಸಾಧಾರಣದಿಂದ ಮಂಜು ಮತ್ತು ಅಲ್ಲಲ್ಲಿ ತುಂತುರು ಮಳೆ ಇರುತ್ತದೆ ಎಂದು ಹೇಳಿದೆ.
ಇಂದು ಮುಂಜಾನೆ ಎಂ.ಜಿ. ರಸ್ತೆ, ಜಯನಗರ, ಹೆಬ್ಬಾಳ, ಸುಲ್ತಾನಪಾಳ್ಯ, ಆರ್.ಟಿ. ನಗರ, ಇಂದಿರಾನಗರ. ಹಲಸೂರು ಮತ್ತು ಆರ್.ಆರ್.ನಗರ ಸೇರಿ ಹಲವೆಡೆ ಲಘು ಮಳೆಯಾಗಿದೆ.
ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ ಎಂದು ತಿಳಿಸಿದೆ.<>