ಬೆಂಗಳೂರು: ರಾಜ್ಯದಾದ್ಯಂತ ಈಗ ಮಳೆ ಮಾಯವಾಗಿ ಚಳಿಗಾಲ ಆರಂಭವಾಗಿದೆ. ಇಂದು ತಾಪಮಾನದಲ್ಲಿ ಭಾರೀ ಇಳಿಕೆಯಾಗುವ ಸಂಭವವಿದ್ದು, ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿ ಪ್ರಭಾವ ಹೆಚ್ಚಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವಾರದ ಆರಂಭದಲ್ಲಿ ವಿಪರೀತ ಎನ್ನುವಷ್ಟು ಚಳಿಯಿತ್ತು. ಆದರೆ ನಂತರ ಚಳಿ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಈ ವಾರದಿಂದ ಮತ್ತೆ ಚಳಿ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ವಿಶೇಷವಾಗಿ ಇಂದು ರಾಜ್ಯದ ಸರಾಸರಿ ಕನಿಷ್ಟ ತಾಪಮಾನ 16 ಡಿಗ್ರಿಯಷ್ಟು ಮತ್ತು ಗರಿಷ್ಠ 26 ಡಿಗ್ರಿಯಷ್ಟಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ಬೀದರ್, ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12-14 ಡಿಗ್ರಿಯವರೆಗರಲಿದೆ.
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15-17 ಡಿಗ್ರಿಯ ಆಸುಪಾಸಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.