Publish Date: Fri, 20 Mar 2026 (08:27 IST)
Updated Date: Fri, 20 Mar 2026 (08:29 IST)
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಇಂದಿನ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ.
ಕಳೆದ ನಾಲ್ಕು ದಿನಗಳಿಂದ ಕರಾವಳಿ, ಮಲೆನಾಡು, ಒಳನಾಡು ಸೇರಿ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿತ್ತು. ಬಹುತೇಕ ಕಡೆ ಆಲಿಕಲ್ಲು ಮಳೆಯಾಗಿತ್ತು. ಬೇಸಿಗೆಯಲ್ಲಿ ಬಂದ ಈ ಮಳೆ ಅನಿರೀಕ್ಷಿತವಾಗಿತ್ತು. ಇದರಿಂದ ರೈತರಿಗೆ ಬೆಳೆ ನಷ್ಟವಾಗಿತ್ತು.
ಇಂದು ರಾಜ್ಯದ ಹವಾಮಾನ ವರದಿಗಳ ಪ್ರಕಾರ ಮಳೆಯ ಸಾಧ್ಯತೆಯಿಲ್ಲ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಬೆಂಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಉಳಿದ ಜಿಲ್ಲೆಗಳಲ್ಲಿ ಇಂದು ದಿನವಿಡೀ ಬಿಸಿಲಿನ ವಾತಾವರಣ ಕಂಡುಬರಲಿದೆ. ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿಯಷ್ಟಿರಲಿದೆ.