Publish Date: Sun, 08 Feb 2026 (10:01 IST)
Updated Date: Sun, 08 Feb 2026 (10:04 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ಇಂದಿನ ಹವಾಮಾನ ವರದಿ.
ರಾಜ್ಯದಲ್ಲಿ ಈಗ ಹಗಲು ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಿಗ್ಗೆ 10 ರಿಂದ ಸಂಜೆ 3 ಗಂಟೆಯವರೆಗೆ ಹೊರಗೆ ಕಾಲಿಡಲಾಗದಷ್ಟು ಬಿಸಿಲಿನ ಝಳ ಕಂಡುಬರುತ್ತಿದೆ. ಆದರೆ ರಾತ್ರಿ ಚಳಿಯೂ ಇರುವುದರಿಂದ ಹೆಚ್ಚು ಸೆಖೆ ಕಂಡುಬರುತ್ತಿಲ್ಲ.
ಇಂದು ಕೆಲವೆಡೆ ಭಾಗಶಃ ಮೋಡ ಕವಿದ ಮತ್ತು ಬಿಸಿಲಿನ ವಾತಾವರಣವಿರಲಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಇಂದು 29 ಡಿಗ್ರಿಗೆ ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ವಿಪರೀತ ಬಿಸಿಲು ಕಂಡುಬರುತ್ತಿದ್ದು ರಾತ್ರಿ ಸಣ್ಣ ಮಟ್ಟಿಗಿನ ಚಳಿ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿಗೆ ಏರಿಕೆಯಾಗಲಿದೆ. ಬಳ್ಳಾರಿ, ಬೀದರ್, ರಾಯಚೂರು, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಡ್ಯ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿಯಷ್ಟಿರಲಿದೆ.