Select Your Language

Notifications

webdunia
webdunia
webdunia
webdunia

Karnataka Weather: ಇಂದು ಮತ್ತಷ್ಟು ಬಿಸಿಯೇರಲಿದೆ ಹವಾಮಾನ, ಹೊರಗೆ ಕಾಲಿಡುವ ಮುನ್ನ ಎಚ್ಚರ

Bengaluru weather
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಇಂದು ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದ್ದು ಇಂದಿನ ಹವಾಮಾನ ವರದಿ ಇಲ್ಲಿದೆ.

ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ತಾಪಮಾನದಲ್ಲಿ ಗಣನೀಯ ಏರಿಕೆಯಾಗಿದೆ. ಹಗಲಿಡೀ ಹೊರಗೆ ಕಾಲಿಡಲಾಗದಷ್ಟು ಬಿಸಿಲು ಕಂಡುಬರುತ್ತಿದೆ. ಇಂದಂತೂ ನಿನ್ನೆಗಿಂತಲೂ ಹೆಚ್ಚು ಬಿಸಿಲು, ತಾಪಮಾನ ಕಂಡುಬರಲಿದೆ ಎಂದು ಹವಾಮಾನ ಮುನ್ಸೂಚನೆಗಳು ಹೇಳುತ್ತಿವೆ.

ನಿನ್ನೆಗೆ ಹೋಲಿಸಿದರೆ ಇಂದು 2 ಡಿಗ್ರಿಯಷ್ಟು ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಇಂದು ಗರಿಷ್ಠ ತಾಪಮಾನ 35 ಡಿಗ್ರಿ ತಲುಪಲಿದೆ. ವಿಪರೀತ ಬಿಸಿಲಿನ ವಾತಾವರಣವಿರಲಿದ್ದು ಬೆಳಿಗ್ಗೆ 10-3 ಗಂಟೆಯವರೆಗೆ ಹೊರಗೆ ಓಡಾಡುವುದನ್ನು ಆದಷ್ಟು ಅವಾಯ್ಡ್ ಮಾಡಿ.

ಇನ್ನು, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಂತೂ ಗರಿಷ್ಠ ತಾಪಮಾನ 39 ಡಿಗ್ರಿ ತಲುಪಲಿದೆ. ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿಯಷ್ಟಿರಲಿದೆ. ಉಳಿದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35-37 ಡಿಗ್ರಿ ಆಸುಪಾಸಿನಲ್ಲಿರಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 35 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟು ಇರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿ ರಾಜ್ಯದಲ್ಲಿ ಶೇ 86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ