ಬೆಂಗಳೂರು: ರಾಜ್ಯದಲ್ಲಿ ಸ್ವಲ್ಪ ಬಿಡುವು ನೀಡಿದ್ದ ಮಳೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೊಟ್ಟಿದೆ.
ಸೋಮವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಹಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿತ್ತು.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆ ಸುರಿಯವ ಸಂಭವ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನೂ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿಯೂ ಜೂ.13ರಂದು ಭಾರೀ ಮಳೆಯ ಹಿನ್ನೆಲೆ ಇಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಸಮುದ್ರ ತೀರದಲ್ಲಿ ಮನರಂಜನೆ ಚಟುವಟಿಕೆಗಳು ಮತ್ತು ಮೀನುಗಾರಿ ನಡೆಸದಂತೆ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಮೈಸೂರು, ಚಾಮರಾಜನಗರ,ಮೈಸೂರು, ಮಂಡ್ಯ,ರಾಮನಗರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ನಲ್ಲಿ ಜೂ.12ರಿಂದ ಮುಂದಿನ 2 ದಿನ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಸಹ ಕೊಡಲಾಗಿದೆ.