ಕರಾವಳಿಯಲ್ಲಿ ಮಳೆಯ ಅಬ್ಬರ: ಕರ್ನಾಟಕ ಇಂದಿನ ಹವಾಮಾನ ವರದಿ ಇಲ್ಲಿದೆ

Krishnaveni K
ಶುಕ್ರವಾರ, 5 ಜುಲೈ 2024 (10:09 IST)
ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಗುಡ್ಡ ಕುಸಿತದ ಭೀತಿ ಎದುರಾಗಿದೆ. ಕರ್ನಾಟಕದಲ್ಲಿ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.

ಕರ್ನಾಟಕದ ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೊಂದೆಡೆ ಗುಡ್ಡ ಕುಸಿತದ ಭೀತಿ ಎದುರಾಗಿದೆ.

ಹವಾಮಾನ ಇಲಾಖೆ ಈಗಾಗಲೇ ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯ ಸೂಚನೆ ನೀಡಿತ್ತು. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಮಳೆ ಕೊಂಚ ಕಡಿಮೆಯಾಗಿದ್ದರೂ ದಿನವಿಡೀ ಮೋಡ ಕವಿದ ವಾತಾವರಣವಿತ್ತು.

ಭಾರೀ ಮಳೆಯಿಂದಾಗಿ ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು ಎನ್ ಡಿಆರ್ ಎಫ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡದ ಪ್ರವಾಸೀ ತಾಣಗಳಿಗೆ ಸದ್ಯಕ್ಕೆ ನಿಷೇಧ ಹೇರಲಾಗಿದೆ. ಇನ್ನೂ ಕೆಲವು ದಿನ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments