ಬೆಂಗಳೂರು: ರಾಜ್ಯದಲ್ಲಿ ಈ ವಾರ ಚಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಈ ಕೆಲವು ಜಿಲ್ಲೆಗಳಿಗೆ ಮೈ ಕೊರೆಯುವ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ವಾರದ ಆರಂಭದಿಂದಲೇ ತಾಪಮಾನದಲ್ಲಿ ಇಳಿಕೆಯಾಗುತ್ತಲೇ ಇದ್ದು ಚಳಿ ತೀವ್ರವಾಗುತ್ತಲೇ ಇದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಚಳಿ ಕಂಡುಬರಲಿದೆ ಎಂದು ವರದಿಗಳು ಹೇಳುತ್ತಿವೆ. ನಿನ್ನೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿತ್ತು. ಇಂದು ಮತ್ತಷ್ಟು ಇಳಿಕೆಯಾಗಲಿದೆ.
ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ನಿನ್ನೆಯೂ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿತ್ತು. ಇಂದು ಕೆಲವು ಜಿಲ್ಲೆಗಳಲ್ಲಂತೂ ಚಳಿಯ ಜೊತೆ ಮಂಜು ಕವಿದ ವಾತಾವರಣವಿರಲಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯ ತನಕ ಇಳಿಕೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ 14-16 ಡಿಗ್ರಿಯಷ್ಟು ಕಂಡುಬರಲಿದೆ.