Daily Horoscope

Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ವರುಣಾರ್ಭಟ

ಕೃಷ್ಣವೇಣಿ ಕೆ
ಸೋಮವಾರ, 21 ಸೆಪ್ಟಂಬರ್ 2026 (08:39 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಚಂಡಮಾರುತದ ಪರಿಣಾಮವಾಗಿ ಇಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
 
ಕರಾವಳಿ ಕರ್ನಾಟಕ:

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಕಾರಣ ಮೀನುಗಾರರು ಜಾಗರೂಕರಾಗಿರಲು ಎಚ್ಚರಿಕೆ ನೀಡಲಾಗಿದೆ.
 
ಉತ್ತರ ಒಳನಾಡು:
ಉತ್ತರ ಕರ್ನಾಟಕದ ಬೀದರ್, ಕಲ್ಬುರ್ಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಭಾಗಗಳಲ್ಲಿ ಹಠಾತ್ ಮಳೆಯಾಗಿ ಸಾಧಾರಣದಿಂದ ಭಾರಿ ಪ್ರಮಾಣದ ಮಳೆ ದಾಖಲಾಗಬಹುದು ಎಂದು ನಿರೀಕ್ಷಿಸಲಾಗಿದೆ.
 
ದಕ್ಷಿಣ ಒಳನಾಡು:
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಿರಲಿದೆ. ಮಲೆನಾಡು ಪ್ರದೇಶಗಳಲ್ಲಿ ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿರಂತರವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
 
ಬೆಂಗಳೂರು ಹಾಗೂ ಸುತ್ತಮುತ್ತಲಿನ ಹವಾಮಾನ:
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದ್ದು, ಮಳೆಯಿಂದಾಗಿ ಗರಿಷ್ಠ ತಾಪಮಾನವು 28 ರಿಂದ 30 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗುವ ಸನ್ನಿವೇಶವಿದೆ.
 

Related News

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments