Publish Date: Fri, 06 Nov 2026 (09:06 IST)
Updated Date: Fri, 06 Nov 2026 (09:08 IST)
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಪ್ರಮುಖ ಬದಲಾವಣೆಗಳಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ನಾಳೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ಕರಾವಳಿ ಕರ್ನಾಟಕ:
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ವರದಿಯಾಗಿದೆ.
ದಕ್ಷಿಣ ಒಳನಾಡು ಮತ್ತು ಬೆಂಗಳೂರು:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ವಿಶೇಷವಾಗಿ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ದಿನವಿಡೀ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು:
ಉತ್ತರ ಒಳನಾಡಿನ ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ.
ಶುಷ್ಕ ವಾತಾವರಣವಿರುವ ಜಿಲ್ಲೆಗಳು:
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಾಗಿ ಒಣ ಹವಾಮಾನವೇ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ.
ಮಳೆಯಾಗುವ ಜಿಲ್ಲೆಗಳಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ