Daily Horoscope

Select Your Language

Notifications

webdunia
webdunia
webdunia
webdunia

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

Bengaluru Rains
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳ ಪ್ರಭಾವ ಸಾಧಾರಣವಾಗಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಇಂದು ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
 

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳು
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಂಜೆ ವೇಳೆ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. 

ಉತ್ತರ ಒಳನಾಡು ಜಿಲ್ಲೆಗಳು
ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಹಾಗೂ ಭಾಗಶಃ ಮೋಡಕವಿದ ವಾತಾವರಣ ಮುಂದುವರಿಯಲಿದೆ.

ಕರಾವಳಿ ಕರ್ನಾಟಕ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವಾಮಾನವಿರಲಿದೆ.

ಉಷ್ಣಾಂಶ ಮುನ್ಸೂಚನೆ
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31-32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಆಜುಬಾಜಿನಲ್ಲಿ ದಾಖಲಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಿರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video