Publish Date: Wed, 21 Aug 2024 (10:03 IST)
Updated Date: Wed, 21 Aug 2024 (10:06 IST)
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಸಂಜೆ ಮಳೆಯಾಗುತ್ತಿದ್ದು, ಕರ್ನಾಟಕದಾದ್ಯಂತ ಯಾವ ದಿನದವರೆಗೆ ಮಳೆಯಾಗಲಿದೆ ಎಂಬ ವರದಿ ಇಲ್ಲಿದೆ ನೋಡಿ.
ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ನಿನ್ನೆ ಕೊಂಚ ಕಡಿಮೆಯಾಗಿದ್ದರೂ ಸಣ್ಣ ಮಳೆಯಾಗಿದೆ. ಕರಾವಳಿ, ಮಲೆನಾಡು, ಒಳನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 27 ರವರೆಗೂ ಮಳೆಯ ಮುಂದುವರಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಯಾದಗಿರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ.
ಇದಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇಂದೂ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ, ಕನಿಷ್ಠ ಉಷ್ಣಾಂಶ 21 ಡಿಗ್ರಿಯಷ್ಟಿದೆ.