ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿರಂತರವಾಗಿ ಮಳೆಯಾಗುತ್ತಿದೆ. ಮಳೆಯ ವಾತಾವರಣ ಇನ್ನೆಷ್ಟು ದಿನವಿರಲಿದೆ ಇಲ್ಲಿದೆ ವಿವರ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಡಿಸೆಂಬರ್ ತಿಂಗಳಲ್ಲೂ ಮಳೆಗಾಲದ ವಾತಾವರಣವಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನಲ್ಲಂತೂ ಸಂಪೂರ್ಣ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದ್ದು, ವಿಪರೀತ ಶೀತ ವಾತಾವರಣವಿದೆ.
ಹವಾಮಾನ ವರದಿ ಪ್ರಕಾರ ಇನ್ನೂ ಎರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ. ಸೋಮವಾರದಿಂದ ಮಳೆ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಮಳೆಯ ಅಬ್ಬರ ಕಡಿಮೆಯಾಗಬಹುದು.
ಇಂದು ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 26 ಡಿಗ್ರ, ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಿರಲಿದೆ. ಬೆಂಗಳೂರು ಮಾತ್ರವಲ್ಲದೆ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಚಿತ್ರದುರ್ಗ, ವಿಜಯಪುರ, ಕಲಬುರಗಿ, ಬೀದರ್, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.