ಬೆಂಗಳೂರು: ರಾಜ್ಯದಲ್ಲಿ ಈ ಹೊಸ ವರ್ಷದ ಮೊದಲ ಮಳೆಯಾಗುವ ಸೂನಚೆಯನ್ನು ಹವಾಮಾನ ಇಲಾಖೆ ನೀಡಿದೆ. ಮತ್ತೊಂದು ಸೈಕ್ಲೋನ್ ಇಫೆಕ್ಟ್ ನಿಂದ ಮಳೆಯಾಗಲಿದೆ.
ಡಿಸೆಂಬರ್ ತಿಂಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಿತ್ತು. ಈಗ ಮತ್ತೊಮ್ಮೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಾದ್ಯಂತ ಮಳೆಯಾಗುವ ಸೂಚನೆ ದೊರೆತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವಾರಣವಿದೆ. ಇಂದು ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜನವರಿ 16 ರವರೆಗೆ ಮಳೇಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಚಂಡಮಾರುತದಿಂದಾಗಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ವಾಯವ್ಯ ಭಾರತ, ಮಧ್ಯ ಭಾರತದ ಬಯಲು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕಕ್ಕೆ ಅಷ್ಟಾಗಿ ಮಳೆಯಾಗುವ ಸಾಧ್ಯತೆಯಿಲ್ಲ. ಆದರೆ ಬೆಂಗಳೂರು ಮತ್ತು ಆಸುಪಾಸಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.