Daily Horoscope

ಕರ್ನಾಟಕದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಮಳೆ

Krishnaveni K
ಸೋಮವಾರ, 27 ಮೇ 2024 (11:23 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಎಷ್ಟು ತಾಪಮಾನವರಲಿದೆ ಎಂಬ ಹವಾಮಾನ ಡೀಟೈಲ್ ಇಲ್ಲಿದೆ ನೋಡಿ.

ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಆದರೆ ಇದೀಗ ವರುಣ ಕೊಂಚ ಬಿಡುವು ನೀಡಿದ್ದಾನೆ. ಬೆಂಗಳೂರಿನಲ್ಲೂ ಬಹುತೇಕ ಮೋಡ ಕವಿದ ವಾತಾವರಣವಿದೆ.

ಆದರೆ ಹವಾಮಾನ ಇಲಾಖೆ ವರದಿ ಪ್ರಕಾರ ಕರ್ನಾಟಕದ ಉತ್ತರ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ಕಾಲ ಮಳೆಯಾಗಲಿದೆ. ಜೊತೆಗೆ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ರಾಯಚೂರು, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿದೆ. ಮುಂದಿನ ಕೆಲವು ದಿನದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ. ಮೇ 31 ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments