ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಭಾರೀ ಮಳೆಯಾಗಿತ್ತು. ಆದರೆ ಇಂದಿನಿಂದ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಇಲ್ಲಿದೆ ಹವಾಮಾನ ವರದಿ.
ಹವಾಮಾನ ವರದಿ ಪ್ರಕಾರ ನಿನ್ನೆಯವರೆಗೆ ರಾಜ್ಯಾದ್ಯಂತ ಜುಲೈ 29 ರವರೆಗೆ ಭಾರೀ ಮಳೆಯಾಗಲಿದೆ ಎಂದಿತ್ತು. ಅದರಂತೆ ನಿನ್ನೆಯವರೆಗೂ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿತ್ತು. ಆದರೆ ಇಂದಿನಿಂದ ಆಗಸ್ಟ್ ಎರಡನೇ ವಾರದವರೆಗೂ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ.
ಆದರೂ ಕರಾವಳಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದಿನಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ಮೋಡಕವಿದ ವಾತಾವರಣವಿತ್ತು.
ಉಳಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ತುಮಕೂರು, ಬಾಗಲಕೋಟೆ, ವಿಜಯಪುರ, ಕಲಬುರಗಿ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಗದಗ, ದಾವಣಗೆರೆ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.