ಬೆಂಗಳೂರು: ರಾಜ್ಯದಲ್ಲಿ ಇಂದು ಒಣ ಹವೆ ಮುಂದುವರಿಯಲಿದ್ದು, ವಿಪರೀತ ಚಳಿ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಚಳಿ ಮತ್ತಷ್ಟು ತೀವ್ರವಾಗಿದೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಒಣ ಹವೆ ಮುಂದುವರಿದಿದೆ. ಆದರೆ ತಾಪಮಾನದಲ್ಲಿ ಮತ್ತಷ್ಟು ಕುಸಿತವಾಗಲಿದೆ. ನಿನ್ನೆ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿತ್ತು.
ಇಂದು ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ಕಂಡುಬರಲಿದೆ. ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯಷ್ಟಕ್ಕಿಳಿಯಲಿದೆ.
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾಗಶಃ ಮೋಡ ಕವಿದ ವಾತಾವರಣ ಮತ್ತು ದಟ್ಟ ಮಂಜು ಕಂಡುಬರುತ್ತಿದೆ. ಕರಾವಳಿ ಜಿಲ್ಲೆಗಳಲ್ಲೂ ಚಳಿ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ.