Daily Horoscope

Karnataka Weather: ಇಂದು ಹವಾಮಾನದಲ್ಲಿ ಆಗಲಿರುವ ಮಹತ್ವದ ಬದಲಾವಣೆ ಗಮನಿಸಿ

Krishnaveni K
ಶುಕ್ರವಾರ, 3 ಏಪ್ರಿಲ್ 2026 (08:41 IST)
ಬೆಂಗಳೂರು: ರಾಜ್ಯದಲ್ಲಿ ಈಗ ಕೆಲವು ಕಡೆ ಬಿಸಿಲಿದ್ದರೆ ಮತ್ತೆ ಕೆಲವು ಕಡೆ ಮಳೆಯಾಗುತ್ತಿದೆ. ಇಂದು ರಾಜ್ಯದ ಹವಾಮಾನದಲ್ಲಿ ಆಗಲಿರುವ ಈ ಮಹತ್ವದ ಬದಲಾವಣೆಯನ್ನು ತಪ್ಪದೇ ಗಮನಿಸಿ.

ಇಷ್ಟು ದಿನ ಕೆಲವು ಕಡೆ ಮಳೆಯಿದ್ದರೆ ಮತ್ತೆ ಕೆಲವು ಕಡೆ ಬಿಸಿಲಿನ ವಾತಾವರಣವಿತ್ತು. ಆದರೆ ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯಿದ್ದರೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಅಥವಾ ಸಾಧಾರಣ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಇಂದು ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ರಾಯಚೂರು, ಬಳ್ಳಾರಿ, ಕಲಬುರಗಿಯಲ್ಲಿ ಇಂದು ಗರಿಷ್ಠ ತಾಪಮಾನ 37 ಡಿಗ್ರಿಯಷ್ಟಿರಲಿದೆ. ಕರ್ನಾಟಕದಲ್ಲಿ ಇಂದು ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments