ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಚಳಿ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು. ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.
ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ತಾಪಮಾನದಲ್ಲಿ ಕೊಂಚ ಏರಿಕೆಯಾಗಿತ್ತು. 16 ಡಿಗ್ರಿಯಷ್ಟು ಕನಿಷ್ಠ ತಾಪಮಾನ ಹೊಂದಿದ್ದ ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 18 ಡಿಗ್ರಿಯವರೆಗೆ ತಲುಪಿದ್ದೂ ಇತ್ತು.
ಅದರೆ ಇಂದಿನಿಂದ ಮತ್ತೆ ಚಳಿ ತೀವ್ರವಾಗಲಿದೆ. ವಾರಂತ್ಯದಲ್ಲಿ ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಯಷ್ಟಾಗುವ ಸಾಧ್ಯತೆಯಿದೆ. ಬೀದರ್, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಕುಸಿತವಾಗಲಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ ಎನ್ನಲಾಗಿದೆ.