ಬೆಂಗಳೂರು: ಹವಾಮಾನ ಇಲಾಖೆ ಪ್ರಕಾರ ಇಂದು ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿದೆ. ಆದರೆ ಮಳೆಯಾಗುವ ಮುನ್ಸೂಚನೆಯಿಲ್ಲ.
ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ 21°C. ಬೆಂಗಳೂರಿನಲ್ಲಿ ಸೂರ್ಯೋದಯವು 06:08 ಆಗಿದ್ದು, ಸೂರ್ಯಾಸ್ತವು 06:12 PM ಕ್ಕೆ ಆಗಲಿದೆ.
ಇನ್ನೂ ಶನಿವಾರ ಬೆಂಗಳೂರಿನ ಹಲವು ಭಾಗದಲ್ಲಿ ಮಧ್ಯಾಹ್ನದ ವೇಳೆ ಭಾರೀ ಮಳೆಯಾಗಿತ್ತು. ನಾಳೆ ಮಾತ್ರ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯಿದೆ.
ಕಳೆದ ಕೆಲ ವಾರಗಳಿಂದ ರಾಜ್ಯದ ಉಡುಪಿ, ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಿದೆ. ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.