ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಚಳಿ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಸಿವೆ.
ಕಳೆದ ವಾರ ವಾಯುಭಾರ ಕುಸಿತದ ಪರಿಣಾಮ ಮಳೆಯಾಗಿತ್ತು. ವಾರಂತ್ಯಕ್ಕೆ ಚಳಿ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರದ ಆರಂಭದಿಂದಲೂ ಮತ್ತೆ ಚಳಿ, ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
ಹವಾಮಾನ ವರದಿಗಳ ಪ್ರಕಾರ ನಿನ್ನೆಗೆ ಹೋಲಿಸಿದರೆ ಇಂದು ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿಗೆ ಕುಸಿಯಲಿದೆ ಎಂದು ವರದಿಗಳು ಹೇಳುತ್ತಿವೆ.
ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13-14 ಡಿಗ್ರಿಯಷ್ಟಿರಲಿದ್ದು ತೀವ್ರ ಚಳಿ ಕಂಡುಬರಲಿದೆ. ಉಳಿದಂತೆ ಬೆಂಗಳೂರು, ತುಮಕೂರು, ಮೈಸೂರು, ಶಿವಮೊಗ್ಗ ಮೊದಲಾದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ.