ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಿಗೆ ಮಳೆಯಾಗಲಿದೆಯೇ, ವಾತಾವರಣ ಹೇಗಿರಲಿದೆ ಎಂಬ ಹವಾಮಾನ ಇಲಾಖೆ ಸಂಪೂರ್ಣ ವಿವರ ಇಲ್ಲಿದೆ.
ಕಳೆದ ವಾರ ಕರ್ನಾಟಕದಲ್ಲಿ ಅಲ್ಲಲ್ಲಿ ಮಳೆಯಾಗಿತ್ತು. ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿದ್ದ ವಾಯುಭಾರ ಕುಸಿತದಿಂದಾಗಿ ಮಳೆಯಾಗಿತ್ತು. ಈಗಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ, ಸೂರ್ಯನ ಕಣ್ಣಾ ಮುಚ್ಚಾಲೆ ನಡೆಯುತ್ತಲೇ ಇರುತ್ತದೆ. ಆದರೆ ಸದ್ಯಕ್ಕೆ ಹವಾಮಾನ ವರದಿ ಪ್ರಕಾರ ಮಳೆಯ ಸಂಭವವಿಲ್ಲ.
ಆದರೆ ಚಳಿಯ ವಾತಾವರಣ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ಚಳಿಯ ವಾತಾವರಣ ತುಸು ಹೆಚ್ಚಾಗಿದೆ. ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಿದೆ. ಬೀದರ್ ನಲ್ಲಿ ಕನಿಷ್ಠ ತಾಪಮಾನ 14.4 ಡಿಗ್ರಿ ಸೆಲ್ಶಿಯಸ್ ಗೆ ತಲುಪಿದೆ.
ಬೆಂಗಳೂರು, ವಿಜಯನಗರ, ತುಮಕೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಕೊಡಗು, ಹಾಸನ, ಧಾರವಾಡ, ಹಾವೇರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಚಾಮರಾಜನಗರ ಜಿಲ್ಲೆಗಳಲ್ಲಿ ಚಳಿಯ ವಾತಾವರಣವಿದೆ. ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿಯಷ್ಟಿದೆ.
ಗದಗ, ಬೀದರ್ ಅಲ್ಲದೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ ಅತೀ ಕಡಿಮೆ ಉಷ್ಣಾಂಶವಿದೆ. ಧಾರವಾಡದಲ್ಲಿ 14.2 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಹಾವೇರಿಯಲ್ಲಿ ಕನಿಷ್ಠ ತಾಪಮಾನ 15.2 ಡಿಗ್ರಿಯಷ್ಟಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಸಂಜೆ ಬಳಿಕ ಆದಷ್ಟು ಹೊರಗಡೆ ಓಡಾಡುವುದನ್ನು ತಪ್ಪಿಸುವುದು ಉತ್ತಮ.