ಚೆನ್ನೈ: ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಅರೆಸ್ಟ್ ಆದ ಟಿವಿಕೆ ಇಬ್ಬರು ಕಾರ್ಯದರ್ಶಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎಫ್‌ಐಆರ್‌ನಲ್ಲಿ ಟಿವಿಕೆ ಪಕ್ಷದ ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮತಿಯಾಳಗನ್ ಮತ್ತು ಕರೂರು ಕೇಂದ್ರ ಜಿಲ್ಲಾ ಕಾರ್ಯದರ್ಶಿ ಕಾಸಿ ಪೌನ್‌ರಾಜ್ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಉಪ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಅವರ ವಿರುದ್ಧವು ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105, 110, 125 ಮತ್ತು 223ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.