Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

Sampriya
ಭಾನುವಾರ, 28 ಸೆಪ್ಟಂಬರ್ 2025 (12:52 IST)
ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಕರೂರ್ ಕಾಲ್ತುಳಿತ ಪ್ರಕರಣ ಸಂಬಂಧ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಅವರು ಪ್ರತಿಕ್ರಿಯಿಸಿದ್ದಾರೆ. 

ನಗರದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರು. ಅದೇ ದೊಡ್ಡ ಆಘಾತವಾಗಿತ್ತು. ಈಗ ಕರೂರಿನಲ್ಲಿ  ಅದಕ್ಕಿಂತಲೂ ದೊಡ್ಡ ದುರಂತವಾಗಿದೆ ಎಂದು ಮರುಕ ವ್ಯಕ್ತಪಡಿಸಿದರು. 

ಈ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ದುರಂತ ದೇಶದಲ್ಲಿ ಹಿಂದೆಂದೂ ನಡೆದಿಲ್ಲ. ದುರ್ಘಟನೆಯಲ್ಲಿ ಚಿಕ್ಕ ಮಕ್ಕಳೂ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದರು.

ಕರೂರು ದುರಂತ ಸಾರ್ವಜನಿಕರಿಗೆ ದೊಡ್ಡ ದಿಗ್ಭ್ರಾಂತಿ ತಂದಿದೆ. ಡಿಎಂಕೆ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡು ಈ ಪ್ರಕರಣವನ್ನು  ವಿಜಯ್ ಅವರ ತಲೆಗೆ ಕಟ್ಟುತ್ತಿದೆ ಎಂದರು. 

ಅವರು ಸ್ಥಳ ಕೇಳಿದ್ದೆಲ್ಲಿ? ಅಲ್ಲಿನ ಸರ್ಕಾರ ಅನುಮತಿ ಕೊಟ್ಟಿದ್ದೆಲ್ಲಿ? ವಿಜಯ್ ಬಂದು ರ‍್ಯಾಲಿ ಮಾಡಿದ್ರು ಹೋದ್ರು, ಅವರದ್ದೂ ತಪ್ಪಿದೆ. ವಿಜಯ್ ಕ್ಷಮೆ ಕೇಳಿಲ್ಲ, ಆಸ್ಪತ್ರೆಗೆ ಹೋಗಲಿಲ್ಲ ಎಂದು ವಿಜಯ್ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments