Select Your Language

Notifications

webdunia
webdunia
webdunia
Sunday, 6 April 2025
webdunia

ಕಾರವಾರ: ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ 7 ತಿಂಗಳ ಮಗು ದುರ್ಮರಣ

Karvar Deadly Road Accident

Sampriya

ಕಾರವಾರ , ಬುಧವಾರ, 19 ಫೆಬ್ರವರಿ 2025 (19:32 IST)
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಹಾಗೂ ಅವರ 7ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮೃತರನ್ನು ಕೊಪ್ಪಳದ ಆರ್ ವೆಂಕಟೇಶ್, ಅವರ ಪತ್ನಿ ಚೈತ್ರಾ ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಎಂದು ಗುರುತಿಸಲಾಗಿದೆ.

ಇನ್ನು ಮೃತ ವೆಂಕಟೇಶ ಅವರ ಸಹೋದರ ಶ್ರೀಕಾಂತ ರೆಡ್ಡಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಕಾರಿನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಕಾರಿಗೆ ಗುದ್ದಿದ ಲಾರಿ ಚಾಲಕ ಪ್ರಶಾಂತ್ ಕುಂಬಾರ ವಿಜಯಪುರ ಮೂಲದವರಗಿದ್ದು, ಇದೀಗ ಪ್ರಶಾಂತ್ ಕುಂಬಾರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು: ಕಟ್ಟಡವೊಂದಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದ ಎರಡು ಅಂತಸ್ತಿನ ಮನೆ ಕುಸಿತ