Daily Horoscope
✕

ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್ ಅಧಿಕಾರಿಗೆ ಕೊಲೆ ಬೆದರಿಕೆ

Webdunia
ಸೋಮವಾರ, 20 ಸೆಪ್ಟಂಬರ್ 2021 (20:45 IST)
ಬೆಂಗಳೂರು: ಹಣ ಮಂಜೂರು ಮಾಡುವಂತೆ ಒತ್ತಾಯಿಸಿ ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್ ಅಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರು ಕುಮಾರ್ ಎಂಬುವರ ವಿರುದ್ದ ದೂರು ನೀಡಿದ್ದು, ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ‌.
ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಮಹಾಲಕ್ಷ್ಮಿ ಲೇಔಟ್​​ನ ಭೋವಿಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾಗಿ‌ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸೆ. 13ರಂದು ಮಧ್ಯಾಹ್ನ ಕಚೇರಿಗೆ ಅತಿಕ್ರಮವಾಗಿ ಪ್ರವೇಶಿಸಿದ್ದರು. ಈ ವೇಳೆ ನಕಲಿ ದಾಖಲಾತಿ ಸೃಷ್ಟಿಸಿ ಮಂಜೂರಾತಿ ಆಗಿರುವಂತೆ ನಂಬಿಸಿ, ಹಣ ಬಿಡುಗಡೆ ಮಾಡುವಂತೆ ಕುಮಾರ್​ ಧಮ್ಕಿ ಹಾಕಿದ್ದಾರೆ‌‌ ಎನ್ನಲಾಗಿದೆ.
ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು ಎಂದು ನಕಲಿ ಸಹಿ ಇರುವ ಮಂಜೂರಾತಿ ಆದೇಶ ತೋರಿಸಿದ್ದಾರೆ. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸಿ ಬೆಂಕಿ ಇಡುವುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ‌‌ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments