ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‍ನಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ನಡೆದಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ.ಒಮರ್ ಅಬ್ದುಲ್ಲಾ ಅವರು, ರಾಹುಲ್ ಭಟ್ ಮೇಲಿನ ಹಂತಕ ಉಗ್ರಗಾಮಿ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ತಹಸಿಲ್ ಕಚೇರಿಯಲ್ಲಿ ಸರ್ಕಾರಿ ನೌಕರನಾಗಿದ್ದ ರಾಹುಲ್ ಅವರ ಮೇಲೆ ದಾಳಿ ನಡೆಸಲಾಯಿತು. ಈ ಹತ್ಯೆಯನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಇದು ಮುಂದುವರಿಯುತ್ತೆ. ಇದರಿಂದ ಜಮ್ಮು-ಕಾಶ್ಮೀರದಲ್ಲಿ ಭಯದ ಭಾವನೆ ಬೆಳೆಯುತ್ತ ಹೋಗುತ್ತೆ. ರಾಹುಲ್ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಬರೆದುಕೊಂಡಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ರಾಹುಲ್ ಭಟ್ ರ ಬರ್ಬರ ಹತ್ಯೆಯನ್ನ ಖಂಡಿಸಿದ್ದಾರೆ.ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಸರ್ಕಾರಿ ನೌಕರಾಗಿದ್ದರು. ಚದೂರ ಪ್ರದೇಶದಲ್ಲಿನ ಅವರ ಕಚೇರಿಯಲ್ಲಿಯೇ ಭಯೋತ್ಪಾದಕರು ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಫಲಕಾರಿಯಾಗದೆ ಪ್ರಾಣ ಬಿಟ್ಟರು