Publish Date: Fri, 20 Oct 2023 (17:41 IST)
Updated Date: Fri, 20 Oct 2023 (17:43 IST)
ನನ್ನ ಬಗ್ಗೆ ತೀರ್ಪು ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನೂ ನ್ಯಾಯಾಧೀಶರೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ಮಾದ್ಯಮದೊಂದಿಗೆ ಮಾತನಾಡಿದ ಅವರು ಬಿಜೆಪಿ ನಾಯಕ ಸಿಟಿ ರವಿಗೆ ಲೂಟಿ ರವಿ ಎಂದು ಹೆಸರು ಕೊಟ್ಟಿದ್ದೇ ಅವರ ಪಕ್ಷದವರು. ಯಾರ್ಯಾರು ಏನು ಮಾತನಾಡಿದ್ದಾರೆ ಎಂಬ ದಾಖಲೆಗಳು ನನ್ನ ಬಳಿ ಇವೆ. ಮುಂದೆ ಸಮಯ ಬರಲಿ ಎಲ್ಲವನ್ನೂ ಹೇಳುತ್ತೇನೆ ಅಂತ ಕಿಡಿಕಾರಿದ್ರು.