ತಮಿಳುನಾಡಿಗೆ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂಜಾನೆ 11 ಗಂಟೆಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ ನೇತೃತ್ವದ ದ್ವಿಸದಸ್ಯ ಪೀಠದಿಂದ ಅರ್ಜಿಯ ವಿಚಾರಣೆ ನಡೆಯಲಿದೆ. ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಲಿದ್ದಾರೆ.
ಸೆಪ್ಟೆಂಬರ್ 5ರಂದು ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್‌ನಂತೆ 10 ದಿನ ನೀರು ಬಿಡವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಅರ್ಜಿ ಸಲ್ಲಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.