Webdunia - Bharat's app for daily news and videos

Install App

ಕಾವೇರಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಬಿಜೆಪಿಯೇ ಅಡ್ಡಿ ಎಂದ ಗುಂಡೂರಾವ್

Webdunia
ಗುರುವಾರ, 15 ಸೆಪ್ಟಂಬರ್ 2016 (14:38 IST)
ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ಬಿಜೆಪಿಯೇ ಅಡ್ಡಿಯಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ಬಿಜೆಪಿಯವರು ಯಾಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ತಿಳಿಯದು. ಈ ವಿಷಯದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ಅಂತರಾಜ್ಯ ಜಲ ವಿವಾಗಳಿಗೆ ಸಂಬಂಧಿಸಿದಂತೆ ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿರುವ ಉದಾಹರಣೆಗಳಿವೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ 8 ಬಾರಿ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಹಿಂದೇಟು ಹಾಕುತ್ತಿದ್ದಾರೆ. ಅವರ ನಡೆ ಅನುಮಾನಾಸ್ಪದವಾಗಿದೆ ಎಂದರು.
 
ಮಹದಾಯಿ ವಿವಾದದಲ್ಲೂ ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯ ಇತ್ಯರ್ಥ್ಯಗೊಳಿಸಿಲ್ಲ. ಜಲ ವಿವಾದದಲ್ಲಿ ಅವರು ತಾತ್ಸಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments