ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ಮಂಡಳಿ ಆದೇಶ ಪಾಲನೆಗೆ ಸೂಚಿಸುವಂತೆ ಕೋರಿ ತಮಿಳುನಾಡು ಸರಕಾರ ಸುಪೀಂ ಕೋರ್ಟ್ ಮೋರೆ ಹೋಗಿದೆ.
ಕೆಆರ್‌ಎಸ್ ನದಿಯಿಂದ 50 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುಲು ಕರ್ನಾಟಕ ಸರಕಾರಕ್ಕೆ ಸೂಚಿಸುವಂತೆ ಕೋರಿ ಇಂದು ತಮಿಳುನಾಡು ಸರಕಾರ ಸುಪೀಂ ಕೋರ್ಟ್ ಮೋರೆ ಹೋಗಿದೆ.
ಕಾವೇರಿ ನದಿಯಿಂದ 10 ದಿನಗಳಲ್ಲಿ 50 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರಕಾರ ಮನವಿ ಮಾಡಿಕೊಂಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಮಿಳುನಾಡು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ತಿಳಿಸಿದ್ದರು. ಜೂನ್ ಮತ್ತು ಜುಲೈ ತಿಂಗಳಲ್ಲಿ ನಮಗೆ ಸಲ್ಲಬೇಕಾಗಿದ್ದ ನೀರನ್ನು ಕರ್ನಾಟಕ ರಾಜ್ಯ ನೀಡಿಲ್ಲ. ಈ ಕುರಿತು ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ