ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ತಮಿಳಿಗರ ದೌರ್ಜನ್ಯ ಸರಿಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ತಮಿಳಿಗರು ನಡೆಸುತ್ತಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ.
ಕರ್ನಾಟಕದಲ್ಲಿ ತಮಿಳು ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲವನ್ನು ಬಂದ್ ಮಾಡಿಸುತ್ತೇವೆ. ತಮಿಳಿಗರ ದೌರ್ಜನ್ಯವನ್ನು ಖಂಡಿಸಿ ರಾಜ್ಯದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಿದೆ. ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆಗೆ ಶೀಘ್ರವೇ ರಾಜ್ಯ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಕನ್ನಡಿಗರ ಮೇಲೆ ತಮಿಳರ ದೌರ್ಜನ್ಯ ಮುಂದುವರೆದರೆ ತೀವ್ರ ಹೋರಾಟ ಅನಿವಾರ್ಯ. ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರು ಕೈಕಟ್ಟಿ ಕೂರಲಾಗಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇರ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.