Select Your Language

Notifications

webdunia
webdunia
webdunia
webdunia

ಕಾವೇರಿ ಮೇಲುಸ್ತುವಾರಿ ಸಮಿತಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ: ಟಿ.ಬಿ.ಜಯಚಂದ್ರ

ಕಾವೇರಿ ಮೇಲುಸ್ತುವಾರಿ ಸಮಿತಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ: ಟಿ.ಬಿ.ಜಯಚಂದ್ರ
ಬೆಳಗಾವಿ , ಸೋಮವಾರ, 19 ಸೆಪ್ಟಂಬರ್ 2016 (13:01 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮೇಲೆ ದೊಡ್ಡ ಜವಾಬ್ದಾರಿಯಿದ್ದು, ರಾಜ್ಯದಲ್ಲಿ ಕೇವಲ ಕುಡಿಯಲು ಮಾತ್ರ ನೀರಿದೆ. ವಾಸ್ತವ ಅಂಶವನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಆಗ್ರಹಿಸಿದ್ದಾರೆ. 
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡನೆ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಪರಸ್ಪರ ಮಾತುಕತೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು ಎಂದರು 
 
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಗಲಭೆಯಲ್ಲಿ ಆರ್‌ಎಸ್‌ಎಸ್ ಪಾತ್ರವಿದೆ ಎಂದು ಹೇಳಿಲ್ಲ: ಪರಮೇಶ್ವರ್