Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ಕಾವೇರಿ ನೀರು: ಸರಕಾರದಿಂದ ಶೀಘ್ರದಲ್ಲಿ ಅಂತಿಮ ತೀರ್ಮಾನ

ತಮಿಳುನಾಡಿಗೆ ಕಾವೇರಿ ನೀರು: ಸರಕಾರದಿಂದ ಶೀಘ್ರದಲ್ಲಿ ಅಂತಿಮ ತೀರ್ಮಾನ
ಬೆಂಗಳೂರು , ಶನಿವಾರ, 27 ಆಗಸ್ಟ್ 2016 (15:32 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವುದು ಸೂಕ್ತವೆಂದು ಕರ್ನಾಟಕ ಪರ ವಕೀಲ ನಾರಿಮನ್ ಅವರು ಸಲಹೆ ನೀಡಿದ್ದರೂ ಈ ಕುರಿತು ಸರಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಲ ನ್ಯಾಯಾಧೀಕರಣದ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿತ್ತು. ಆದರೆ, ಈ ಸಲ ರಾಜ್ಯದಲ್ಲಿ ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಜಲಾಶಯಗಳು ಭರ್ತಿಯಾಗಿಲ್ಲ. ಹೀಗಾಗಿ ಕೆಆರ್‌ಎಸ್ ನದಿಯಿಂದ ನೀರು ಬಿಡುವುದರ ಕುರಿತು ಸರಕಾರ ನಿರ್ಧರಿಸಬೇಕಿದೆ ಎಂದರು.
 
ರಾಜ್ಯದಿಂದ 50 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣದ ವಿಚಾರಣೆ ಸೆಪ್ಟೆಂಬರ್ 25ರಂದು ನಡೆಯಲಿದೆ. ಈ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರ ಹಿಂಸಾಚಾರಕ್ಕೆ ಪಾಕ್ ನೇರ ಹೊಣೆ: ಮುಫ್ತಿ