Publish Date: Mon, 22 Jun 2026 (14:50 IST)
Updated Date: Mon, 22 Jun 2026 (14:53 IST)
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ ಬಿ ಅವರು ಅಧಿಕಾರ ವಹಿಸಿಕೊಂಡರು.
2010 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಅವರು, ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಸಿದ್ದರು.
2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸೆಲ್ವಮಣಿ ಆರ್. ಅವರಿಂದ ಶಿವಕುಮಾರ್ ಅಧಿಕಾರ ವಹಿಸಿಕೊಂಡರು, ಅವರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಎಸ್‌ಆರ್‌ಟಿಸಿ ಎಂಡಿಯಾಗಿ ಕೆಲಸ ನಿರ್ವಹಿಸಿದ್ದರು.
ಸೆಲ್ವಮಣಿ ಅವರ ಮೊದಲು, 2012 ರ ಬ್ಯಾಚ್‌ನ ಅಧಿಕಾರಿ ಅಕ್ರಮ್ ಪಾಷಾ ಅವರು ಕೆಎಸ್‌ಆರ್‌ಟಿಸಿಯನ್ನು ಒಂದು ವರ್ಷ ಮುನ್ನಡೆಸಿದರು ಮತ್ತು ಜೂನ್ 10ರಂದು ವರ್ಗಾವಣೆಗೊಂಡಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ