Select Your Language

Notifications

webdunia
webdunia
webdunia
webdunia

ಕೆ.ಸಿ. ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪ; ಇದು ರಾಜಕೀಯ ಪ್ರೇರಿತ ಎಂದ ದಿನೇಶ್ ಗುಂಡೂರಾವ್

ಕೆ.ಸಿ. ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪ; ಇದು ರಾಜಕೀಯ ಪ್ರೇರಿತ ಎಂದ ದಿನೇಶ್ ಗುಂಡೂರಾವ್
ಬೆಂಗಳೂರು , ಸೋಮವಾರ, 22 ಅಕ್ಟೋಬರ್ 2018 (14:23 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇದು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.


ಕೇರಳದಲ್ಲಿ ಭಾರಿ ಸದ್ದು ಮಾಡಿದ್ದ ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ  ಮೇಲೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಮಾಜಿ ಮುಖ್ಯಮಂತ್ರಿ ಊಮ್ಮನ್ ಚಾಂಡಿ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.


ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು,’ ಇದು ರಾಜಕೀಯ ಪ್ರೇರಿತವಾಗಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆಯೂ ಈ ಆರೋಪ ಕೇಳಿಬಂದಿತ್ತು. ಇದು ರಾಜಕೀಯ ದುರುದ್ದೇಶದಿಂದ ದಾಖಲಾಗಿರುವ ದೂರು ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಲಿಫೋರ್ನಿಯಾದ ವಿದ್ಯಾರ್ಥಿನಿ ಕುಕೀಸ್ ತಯಾರಿಸಿದ್ದು ಯಾವುದರಿಂದ ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ