Select Your Language

Notifications

webdunia
webdunia
webdunia
webdunia

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

KC Venugopal-DK Shivakumar

Krishnaveni K

ಬೆಂಗಳೂರು , ಶುಕ್ರವಾರ, 1 ಆಗಸ್ಟ್ 2025 (08:46 IST)
ಬೆಂಗಳೂರು: ಆಗಸ್ಟ್‌ 5 ರಂದು ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗಳಿಗೆ ಗುರುವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.
 
"ಕರ್ನಾಟಕ ಚುನಾವಣಾ ಆಯೋಗದ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಇದರ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ" ಎಂದರು. ಮತಗಳ್ಳತನದ ವಿರುದ್ಧ ಮಹದೇವಪುರ ವ್ಯಾಪ್ತಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

 
ಮತಗಳವು ಪ್ರತಿಭಟಿಸಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ಚಳವಳಿ ನಡೆಸಲಿರುವ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪೂರ್ವಸಿದ್ಧತೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ   ಕೆ ಸಿ ವೇಣುಗೋಪಾಲ್, ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಶ್ರೀ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್  ಹಾಗೂ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತಿತರರ ಜತೆ ಗುರುವಾರ ರಾತ್ರಿ ಪರಿಶೀಲನೆ ನಡೆಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ