ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂಹಕಾರ ಮತ್ತು ಉಡಾಫೆ ಮಾತುಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾದಲ್ಲಿ ಕಾಂಗ್ರೆಸ್‌ಗೆ ಉಪಚುನಾವಣೆ ಗೆಲ್ಲುವುದು ತುಂಬಾ ಕಷ್ಟವಾಗುತ್ತದೆ
ಉಪ ಚುನಾವಣೆಯಲ್ಲಿ ಜಯಗಳಿಸದಿದ್ದರೆ ಅಸಮಧಾನ ಭುಗಿಲೇಳುತ್ತದೆ. ಸಿಎಂ ಸಿುದ್ದದರಾಮಯ್ಯ ಮನೆಗೆ ಹೋಗುವುದು ನಿಶ್ಚಿತ. ಆದ್ದರಿಂದ, ಸಿಎಂ ಸಿದ್ದರಾಮಯ್ಯ ರಥಯಾತ್ರೆ ಮಾಡಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದು ಸೂಕ್ತ ಎಂದು ಸಲಹೆ ನೀಡಿದರು.
ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಸುಳ್ಳು ಹೇಳಿದ್ದಾರೆ. ಒಂದು ವೇಳೆ ಜಾರಿಗೆ ತಂದಿದ್ದರೆ ಸೈನಿಕ ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಎಂದು ಪ್ರಶ್ನಿಸಿದರು.
ಆತ್ಮಹತ್ಯೆ ಮಾಡಿಕೊಂಡ ಸೈನಿಕನನ್ನು ನೋಡಲು ಆಸ್ಪತ್ರೆಗೆ ತೆರಳಿದ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಎರಡು ಬಾರಿ ಬಂಧಿಸಿದ್ದಾರೆ. ಇದೊಂದು ಮೋದಿಯ ಸರ್ವಾಧಿಕಾರಿ ಧೋರಣೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ