Publish Date: Sat, 22 Jan 2022 (14:02 IST)
Updated Date: Sat, 22 Jan 2022 (14:06 IST)
ಬೆಂಗಳೂರು : ನಮ್ಮ ಆರೋಗ್ಯ ನಮ್ಮ ಕೈಯಲ್ಲಿ, ಜೀವ ಹಾಗೂ ಜೀವನ ಎರಡೂ ಮುಖ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೋವಿಡ್-19 3ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ಖeಟಚಿಣeಜ
ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು.
ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.