Select Your Language

Notifications

webdunia
webdunia
webdunia
webdunia

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ಮಾನ್ಯತೆಯ ಗರಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

Sampriya

ಬೆಂಗಳೂರು , ಗುರುವಾರ, 28 ಆಗಸ್ಟ್ 2025 (15:10 IST)
Photo Credit X
ಬೆಂಗಳೂರು:  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (BLR ಏರ್‌ಪೋರ್ಟ್) ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್‌ನ (ACI) ಆಕ್ಸೆಸಿಬಿಲಿಟಿ ಎನ್‌ಹಾನ್ಸ್‌ಮೆಂಟ್ ಅಕ್ರೆಡಿಟೇಶನ್ (AEA) ಕಾರ್ಯಕ್ರಮದ ಅಡಿಯಲ್ಲಿ ಲೆವೆಲ್-2 ಮಾನ್ಯತೆ ಪಡೆದ ಭಾರತದ ಮೊದಲ ವಿಮಾನ ನಿಲ್ದಾಣವಾಗಿದೆ ಎಂದು ಅದರ ನಿರ್ವಾಹಕರು ಆಗಸ್ಟ್ 28 ರಂದು ಘೋಷಿಸಿದರು.

ವಿಮಾನ ನಿಲ್ದಾಣಗಳಲ್ಲಿ ಸೌಲಭ್ಯ, ಪ್ರಯಾಣಿಕ ಸ್ನೇಹಿ ಸೌಕರ್ಯ ಹಾಗೂ ತಂತ್ರಜ್ಞಾನಗಳ ಬಳಕೆಗಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎಎಲ್) ಎಸಿಐನ 2ನೇ ಹಂತದ ಪ್ರಮಾಣಪತ್ರ ಪಡೆದಿದೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯು (ಎಸಿಐ) ಪ್ರವೇಶ ವರ್ಧಕ ಮಾನ್ಯತೆ (ಎಇಎ) ಕಾರ್ಯಕ್ರಮದಡಿ ವಿಮಾನ ನಿಲ್ದಾಣಗಳಲ್ಲಿನ ಸೌಲಭ್ಯ, ತಂತ್ರಜ್ಞಾನ ಬಳಕೆ, ಪ್ರಯಾಣಿಕ ಸ್ನೇಹಿ ಸೌಕರ್ಯಗಳನ್ನು ಆಧರಿಸಿ ಮಾನ್ಯತೆಯನ್ನು ನೀಡುತ್ತದೆ. ಈ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ 2ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳದಲ್ಲಿ ವಿಚಾರದಲ್ಲಿ ಸರ್ಕಾರದ ನಡೆ ಸರಿಯಿಲ್ಲ: ಕುಮಾರಸ್ವಾಮಿ ಕಿಡಿ