Select Your Language

Notifications

webdunia
webdunia
webdunia
Thursday, 10 April 2025
webdunia

ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕ್ ಪರೀಕ್ಷೆ ? : ಕೇಂದ್ರ ಹಣಕಾಸು ಸಚಿವಾಲಯ

bangalore
bangalore , ಬುಧವಾರ, 14 ಜುಲೈ 2021 (14:06 IST)
ಸ್ಥಳಿಯ ಭಾಷೆಗಳಲ್ಲಿ ಬ್ಯಾಂಕ್ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರತ್ಯೇಕ ಸಮಿತಿ ರಚನೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಸಲಾಗುವ ಪರೀಕ್ಷೆ ಇದಾಗಿದ್ದು, ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಬೇಡಿಕೆ ಹೆಚ್ಚಾಗಿದೆ.ಇದಕ್ಕಾಗಿ ಪ್ರತ್ಯೇಕ ಸಮಿತಿ ವರದಿ ಸಲ್ಲಿಸುವವರೆಗೂ ಐಬಿಪಿಎಸ್ ನಡೆಸುವ ಪರೀಕ್ಷೆಗಳಿಗೆ ತಡೆ ಹಿಡಿದಿದ್ದಾರೆ. ಸಮಿತಿಯು ತನ್ನ ಶಿಫಾರಸುಗಳನ್ನು 15 ದಿನಗಳೊಳಗೆ ನೀಡುವಂತೆ ಸೂಚಿಸಲಾಗಿದೆ. ಪ್ರಸಕ್ತ ಬ್ಯಾಂಕ್ ಗಳ  ಪರೀಕ್ಷೆಗಳನ್ನು ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ನಡೆಸಲಾಗುತ್ತಿದ್ದು, ಈಗ ಕನ್ನಡಿಗರಿಗಾಗಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಚಿಂತನೆ ಇದ್ದು, ಇದೀಗ ಕನ್ನಡಿಗರ  ಬಹುದಿನದ ಬ್ಯಾಂಕಿಂಗ್ ಪರೀಕ್ಷೆ ಬೇಡಿಕೆ ಈಡೇರುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!