Publish Date: Tue, 18 Dec 2018 (18:37 IST)
Updated Date: Tue, 18 Dec 2018 (18:39 IST)
ಚಿತ್ರದ ಬಿಡುಗಡೆಯಲ್ಲಿಯೂ ಕೆಜಿಎಫ್ ಹವಾ ಸೃಷ್ಠಿಮಾಡಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ತೆರೆಗೆ ಬರಲು ಸಿದ್ಧಗೊಂಡಿದೆ. ವಿಶೇಷ ಎಂದರೆ ದೇಶಾದ್ಯಂತ ಕೆಜಿಎಫ್ ಚಿತ್ರ 5 ಭಾಷೆಗಳಲ್ಲಿ 2000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಯಶ್ ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ತಮಿಳು, ತೆಲುಗು ಮಲಯಾಳಂ ಮತ್ತು ಹಿಂದಿ ಭಾಷೆಯ ಕೆಜಿಎಫ್ ಸಿನಿಮಾ ಪ್ರದರ್ಶನವಾಗಲಿದೆ. ಆಂದ್ರಪ್ರದೇಶ ಮತ್ತು ತೆಲಂಗಾಣದ ಸುಮಾರು 350 ಥಿಯೇಟರ್ಗಳಲ್ಲಿ ಕೆಜಿಎಫ್ ಪ್ರದರ್ಶನ ಕಾಣಲಿದೆ. ಹಿಂದಿ ವರ್ಷನ್ ಒಂದು ಸಾವಿರ ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ.