ಬೆಂಗಳೂರು: ಇತ್ತೀಚೆಗೆ ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿದ್ದ ಸಚಿವ ಕೆಎಚ್ ಮುನಿಯಪ್ಪ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇನೂ ಹೇಳೇ ಇಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಅಧಿಕಾರ ಹಂಚಿಕೆ ಸಂಬಂಧ ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಒಪ್ಪಂದವಾಗಿತ್ತು ಎಂದು ಈ ಹಿಂದೆ ಡಿಕೆ ಶಿವಕುಮಾರ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೆಎಚ್ ಮುನಿಯಪ್ಪ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿದೆ, ಡಿಕೆ ಶಿವಕುಮಾರ್ ಹೇಳಿದ್ದು ನಿಜ ಎಂದಿದ್ದರು.
ಅವರ ಈ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೆಎಚ್ ಮುನಿಯಪ್ಪ ಉಲ್ಟಾ ಹೊಡೆದಿದ್ದಾರೆ. ಕೋಲಾರದಲ್ಲಿ ನಾನು ಹಿಂದೆ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ. ಅಧಿಕಾರ ಹಂಚಿಕೆಬಗ್ಗೆ ನಾನು ಯಾವ ಹೇಳಿಕೆಯನ್ನೂ ನೀಡಿಲ್ಲ ಎಂದಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಬಾರದು ಎಂದು ಸೂಚನೆ ಬಂದ ಹಿನ್ನಲೆಯಲ್ಲಿ ಕೆಎಚ್ ಮುನಿಯಪ್ಪ ತಮ್ಮ ಹೇಳಿಕೆ ಹಿಂಪಡೆದರಾ ಎಂಬ ಅನುಮಾನ ಮೂಡಿದೆ. ಇದಕ್ಕೆ ಮೊದಲು ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಯಾವ ಒಪ್ಪಂದವೂ ಆಗಿಲ್ಲ ಎಂದಿದ್ದರು.