Publish Date: Fri, 12 Jan 2018 (17:23 IST)
Updated Date: Fri, 12 Jan 2018 (17:25 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಜನಪರ ಕಾರ್ಯಕ್ರಮಗಳೆ ಮುಂದಿನ ಚುನಾವಣೆಯಲ್ಲಿ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದು ಗಮನಿಸಿದರೆ, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ನಿದರ್ಶನವೆಂಬಂತಿದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.